Advertisement

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ : ಅಕ್ಟೋಬರ್ 31 ರಂದು ಶಿರ್ವ ಶಾಖೆ ಉದ್ಘಾಟನೆ

ಶಿರ್ವ : ಉಡುಪಿಯ ಕುಂಜಿಬೆಟ್ಟುವಿನಲ್ಲಿ ಪ್ರಧಾನ ಶಾಖೆ ಮತ್ತು ಪ್ರಥಮ ಶಾಖೆ ಹೊಂದಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಇದರ ದ್ವಿತೀಯ ಶಾಖೆಯು, ಅಕ್ಟೋಬರ್ 31 ರಂದು ಶಿರ್ವ ಗ್ರಾಮ ಪಂಚಾಯತ್ ಕಚೇರಿಯ ಬಳಿ ಬೆಹರೈನ್ ಟವರ್ ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮ ಗುರು ವಂ. ಫಾ. ಚಾರ್ಲ್ಸ್ ಮಿನೇಜಸ್ ಆಶೀರ್ವಚನ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋ. ಆಪರೇಟಿವ್ ಬೆಂಗಳೂರು ಇದರ ನಿರ್ದೇಶಕರಾದ ಮಂಜುನಾಥ್ ಎಸ್. ಕೆ., ಡಿವೈನ್ ರೆತಿರ್ ಸೆಂಟರ್ ಪೊಟ್ಟ ಕೇರಳ ಇಲ್ಲಿಯ ಧರ್ಮಗುರುಗಳಾದ ಫಾ. ರಿಚರ್ಡ್ ಕ್ವಾಡ್ರಸ್, ಉಡುಪಿ ಜಿಲ್ಲಾ ಸೌಹಾರ್ದ ಕೋ. ಆಪರೇಟಿವ್ ಯೂನಿಯನ್ ನ ಅಧ್ಯಕ್ಷ ಪಿ. ಜಗನ್ನಾಥ ಶೆಟ್ಟಿ, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ಅಧ್ಯಕ್ಷ ಮೇಲ್ವಿನ್ ಅರಾನ್ನ, ಕರ್ನಾಟಕ ರಾಜ್ಯ ಸೌಹಾರ್ದ ಪೆಡರಲ್ ನ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ. ಎಸ್., ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೀವನ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಈ ಸೊಸೈಟಿಯು ಆರಂಭವಾಗಿ ಕೇವಲ ಮೂರು ವರ್ಷಗಳಾಗಿದ್ದು, ಪ್ರಗತಿಪತದಲ್ಲಿದೆ. ನಿರ್ದೇಶಕ ಮಂಡಳಿಯ ಮಾರ್ಗದರ್ಶನ ಮತ್ತು ಸಿಬ್ಬಂದಿಗಳ ಅವಿರತ ಪ್ರಯತ್ನದಿಂದ ಹಾಗೂ ವಿಶೇಷವಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಸಹಕಾರಿ ಅನುಭವ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದರ ಮೂರನೇ ಶಾಖೆಯು ನವೆಂಬರ್ ನಲ್ಲಿ ಪೆರಂಪಳ್ಳಿಯಲ್ಲಿ ಉದ್ಘಾಟನೆಗೊಳ್ಳಲಿದೆ.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.