

ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮವನ್ನು ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ ಅವರು ಉದ್ಘಾಟಿಸಿದರು. ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಸದಸ್ಯರಾದ ರತ್ನಾಕರ್ ಶೆಟ್ಟಿ, ಸುರೇಶ್ ದೇವಾಡಿಗ, ಉಡುಪಿ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ, ಅರಣ್ಯ ಅಧಿಕಾರಿ ಜಿ ಕೃಷ್ಣಪ್ಪ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ಪುಂಡಲಿಕ ಮರಾಠೆ, ಕೋಶಾಧಿಕಾರಿ ಸಂತೋಷ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಸುರೇಶ್ ಎರ್ಮಾಳು, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ್ ಆಚಾರ್ಯ, ಪ್ರಮೋದ್ ಸುವರ್ಣ, ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.






