

ಶಿರ್ವ, ಉಡುಪಿ: ಶಿಕ್ಷಣ ಮತ್ತು ಮೌಲ್ಯಗಳ ಸಮನ್ವಯದೊಂದಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಮುಂಚೂಣಿಯಲ್ಲಿರುವ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್, ಶಿರ್ವ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿರುವ ಶಾಲೆ, ಈ ವರ್ಷವೂ ಅತ್ಯುತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 21 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಆಧುನಿಕ ಶಿಕ್ಷಣದ ಜೊತೆಗೆ ಅರಬಿಕ್, ದೀನಿಯತ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್, ಕರಾಟೆ ತರಗತಿಗಳು ಹಾಗೂ ಸ್ವಚ್ಛ ಮತ್ತು ಶಿಸ್ತಿನ ವಾತಾವರಣ ಶಾಲೆಯ ವಿಶೇಷತೆಯಾಗಿವೆ.
ಅನುಭವಸಂಪನ್ನ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ.
ವಿದ್ಯಾರ್ಥಿಗಳ ಬೌದ್ಧಿಕ, ನೈತಿಕ ಮತ್ತು ದೈಹಿಕ ಬೆಳವಣಿಗೆಗೆ ವಿಶೇಷ ಒತ್ತು ನೀಡುತ್ತಿರುವ ಶಾಲೆಯಲ್ಲಿ ಎಲ್.ಕೆ.ಜಿ ಇಂದ ಹೈಸ್ಕೂಲ್ ವರೆಗೆ ಪ್ರವೇಶಾತಿ ಪ್ರಾರಂಭವಾಗಿದೆ. ಆಸಕ್ತ ಪೋಷಕರು ಶೀಘ್ರದಲ್ಲೇ ಶಾಲೆಯನ್ನು ಸಂಪರ್ಕಿಸಿ
7338077962/ 9141222432






