Advertisement

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಲಯನ್ ಉದಯಕುಮಾರ್ ಹೆಗ್ಡೆ, ಯರ್ಲಪಾಡಿ ನೇಮಕ

Editorialನೇಮಕ3 months ago21 Views

ಉಡುಪಿ, ಜುಲೈ 18: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸಮಾಜಸೇವಕ, ಸಂಘಟಕ ಲಯನ್ಸ್ ನಾಯಕ ಲಯನ್ ಉದಯಕುಮಾರ್ ಹೆಗ್ಡೆ, ಯರ್ಲಪಾಡಿ ಅವರನ್ನು ನೇಮಕ ಮಾಡಲಾಗಿದೆ.

ಉದಯಕುಮಾರ್ ಹೆಗ್ಡೆ ಅವರು ಹಲವು ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಹಕಾರ ಹಾಗೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕಾರ್ಕಳ ಭೂನ್ಯಾಯ ಮಂಡಳಿ ಸದಸ್ಯರಾಗಿ, ನೀರೆ ಬೈಲೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರಾಗಿ ಮೂರು ಅವಧಿಗಳಲ್ಲಿ, ಸ್ವರ್ಣ ಸೌಹಾರ್ದ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಅಲ್ಲದೆ ಬೈಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ನೀರೆಬೈಲೂರಿನ ಅಧ್ಯಕ್ಷರಾಗಿ, ಲಯನ್ಸ್ ಜಿಲ್ಲೆ 317Cಯ ವಲಯಾಧ್ಯಕ್ಷರಾಗಿ, ಪ್ರಾಂತೀಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಸಂಪುಟ ಸದಸ್ಯರಾಗಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಕರ್ವಾಲು ಹಾಗೂ ಶ್ರೀ ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು, ಮೂಡಬಿದ್ರೆ ಬ್ರಹ್ಮಕಲಶೋತ್ಸವ ಸಮಿತಿಗಳ ಅಧ್ಯಕ್ಷರಾಗಿ, ಆಡಳಿತ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷರಾಗಿ, ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಯರ್ಲಪಾಡಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ, ಬೈಲೂರು ಶ್ರೀ ರಾಮ ಮಂದಿರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮೈತ್ರಿ ಸೇವಾ ಸಂಘ, ಪೃಥ್ವಿ ಯುವಕ ಮಂಡಲ, ಪಂಚಾಯತ್ ರಾಜ್ ಒಕ್ಕೂಟ ಕಾರ್ಕಳ ತಾಲೂಕು, ಕಾರ್ಕಳ ತಾಲೂಕು ಲಾರಿ ಚಾಲಕರು ಮತ್ತು ಮಾಲಕರ ಸಂಘ ಸೇರಿದಂತೆ ಹತ್ತು ಹಲವು ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಮನ್ನಣೆ ಗಳಿಸಿದ್ದಾರೆ.

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.